ಐಪಿಎಲ್-11ರ ವೇಳಾಪಟ್ಟಿ ಪ್ರಕಟ: ಉದ್ಘಾಟನಾ ವಂದ್ಯದಲ್ಲಿ ಮುಂಬೈ-ಚೆನ್ನೈ ಫೈಟ್

0
343
PC: BCCI
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 11ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಇಂಡಿಯನ್ಸ್ ಮತ್ತು ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ.
PC: BCCI
ಈ ಪಂದ್ಯ ಏಪ್ರಿಲ್ 7ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಫೈನಲ್ ಪಂದ್ಯ ಮೇ 27ರಂದು ಇದೇ ಮೈದಾನದ ಆತಿಥ್ಯದಲ್ಲಿ ನಡೆಯಲಿದೆ.
ಕಳೆದ 10 ಆವೃತ್ತಿಗಳಲ್ಲಿ ಒಮ್ಮೆಯೂ ಪ್ರಶಸ್ತಿ ಗೆಲ್ಲಲು ವಿಫಲವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ತಮ್ಮ ಮೊದಲ ಪಂದ್ಯದಲ್ಲಿ ಏಪ್ರಿಲ್ 8ರಂದು ಮಾಜಿ ಚಾಂಪಿಯನ್ ಕೋಲ್ಕೊತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಭಾರತದ ಕ್ರಿಕೆಟ್ ಕಾಶಿ ಖ್ಯಾತಿಯ ಕೋಲ್ಕೊತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿದೆ.
ಐಪಿಎಲ್-11ರ ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ