Friday, April 19, 2024

ಕೆಕೆಆರ್‌ಗೆ ದಿನೇಶ್ ಕಾರ್ತಿಕ್ ಕ್ಯಾಪ್ಟನ್.. ಭಗ್ನವಾಯ್ತು ಕೊಡಗಿನ ವೀರನ ನಾಯಕತ್ವದ ಕನಸು!

ಕೋಲ್ಕೊತಾ: 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಕೋಲ್ಕ್ಕೊತಾ ನೈಟ್ ರೈಡರ್ಸ್ ತಂಡವನ್ನು ತಮಿಳುನಾಡಿನ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಮುನ್ನಡೆಸಲಿದ್ದಾರೆ.

PC: Twitter/KKR

ದಿನೇಶ್ ಕಾರ್ತಿಕ್ ಅವರನ್ನು ತಂಡದ ನಾಯಕರನ್ನಾಗಿ ನೈಟ್ ರೈಡರ್ಸ್ ಫ್ರಾಂಚೈಸಿ ಆಯ್ಕೆ ಮಾಡಿದೆ. ಇದರೊಂದಿಗೆ ಕೆಕೆಆರ್ ತಂಡದ ನಾಯಕತ್ವದ ರೇಸ್‌ನಲ್ಲಿದ್ದ ಕನ್ನಡಿಗ ರಾಬಿನ್ ಉತ್ತಪ್ಪ ಅವರಿಗೆ ನಿರಾಸೆಯಾಗಿದ್ದು, ಕೊಡಗಿನ ವೀರನನ್ನು ಹಿಂದಿಕ್ಕಿ ದಿನೇಶ್ ಕಾರ್ತಿಕ್ ನಾಯಕರಾಗಿ ಆಯ್ಕೆಯಾಗಿದ್ದಾರೆ.
ರಾಬಿನ್ ಉತ್ತಪ್ಪ ಕಳೆದ 4 ವರ್ಷಗಳಿಂದ ಕೋಲ್ಕೊತಾ ನೈಟ್ ರೈಡರ್ಸ್ ತಂಡದ ಪರ ಆಡುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ನಾಯಕತ್ವದ ನಿರೀಕ್ಷೆಯಲ್ಲಿದ್ದರು. ನಾಯಕತ್ವ ನೀಡದರೆ ತಂಡವನ್ನು ಮುನ್ನಡೆಸಲು ಸಿದ್ಧ ಎಂದು ರಾಬಿನ್ ಉತ್ತಪ್ಪ ಹೇಳಿದ್ದರು. ಆದರೆ ಇದೀಗ ಕೊಡಗಿನ ವೀರನಿಗೆ ನಿರಾಸೆಯಾಗಿದೆ. ಕನ್ನಡಿಗನನ್ನು ಪಕ್ಕಕ್ಕೆ ಸರಿಸಿ ತಮಿಳುನಾಡಿನ ಆಟಗಾರನಿಗೆ ನೈಟ್ ರೈಡರ್ಸ್ ಫ್ರಾಂಚೈಸಿ ಮಣೆ ಹಾಕಿದೆ.
ಕೋಲ್ಕತಾ ನೈಟ್ ರೈಡರ್ಸ್ ತಂಡ ದಿಲ್ಲಿಯ ಗೌತಮ್ ಗಂಭೀರ್ ಅವರ ನಾಯಕತ್ವದಲ್ಲಿ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು. ಆದರೆ ಈ ಬಾರಿ ಗಂಭೀರ್ ತಮ್ಮ ತವರು ತಂಡವಾದ ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
11ನೇ ಆವೃತ್ತಿಯ ಐಪಿಎಲ್ ಟೂರ್ನಿ ಏಪ್ರಿಲ್ 7ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

Related Articles