ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿದ ರೋಹಿತ್ ಶರ್ಮಾ

0
365
PC: Twitter/BCCI
ಪೋರ್ಟ್ ಎಲಿಜಬೆತ್: ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಭಾರತದ ಆಟಗಾರರ ಪೈಕಿ 2ನೇ ಸ್ಥಾನಕ್ಕೇರಿದ್ದಾರೆ.
PC: Twitter/BCCI
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮಾಡಿದರು. ಒಟ್ಟು 265 ಸಿಕ್ಸರ್‌ಗಳನ್ನು ಸಿಡಿಸಿರುವ ರೋಹಿತ್ ಶರ್ಮಾ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಕ್ಕೆ ತಳ್ಳಿದ್ದಾರೆ. ಸಚಿನ್ 264 ಸಿಕ್ಸರ್‌ಗಳನ್ನು ಸಿಡಿಸಿದ್ದರು.
338 ಸಿಕ್ಸರ್‌ಗಳನ್ನು ಬಾರಿಸಿರುವ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೊದಲ ಸ್ಥಾನದಲ್ಲಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ ಆತಿ ಹೆಚ್ಚು ಸಿಕ್ಸರ್ಸ್

ಎಂ.ಎಸ್ ಧೋನಿ: 338

ರೋಹಿತ್ ಶರ್ಮಾ: 265

ಸಚಿನ್ ತೆಂಡೂಲ್ಕರ್: 264

ಯುವರಾಜ್ ಸಿಂಗ್: 251

ಸೌರವ್ ಗಂಗೂಲಿ: 247