Monday, April 15, 2024

ಹೊಸ ಲುಕ್‌ನೊಂದಿಗೆ ಐಪಿಎಲ್‌ಗೆ ಸಜ್ಜಾದ ಕಿಂಗ್ ಕೊಹ್ಲಿ!

ಬೆಂಗಳೂರು: ಟೀಮ್ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಾಯಕ, ಕ್ರಿಕೆಟ್ ಜಗತ್ತಿನ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಹೊಸ ಕೇಶ ವಿನ್ಯಾಸ ಮಾಡಿಸಿಕೊಂಡಿದ್ದಾರೆ.
PC: Twitter/Virat Kohli
ಕ್ರಿಕೆಟ್‌ನಿಂದ ಬಿಡುವು ಪಡೆದಿರುವ ವಿರಾಟ್ ಕೊಹ್ಲಿ ಮುಂಬೈನಲ್ಲಿರುವ ‘ಹಕೀಮ್ ಆಲಿಮ್ಸ್ ಹೇಲ್ ಆ್ಯಂಡ್ ಟ್ಯಾಟೂ‘ ಕೇಂದ್ರದಲ್ಲಿ ಹೊಸ ಹೇರ್ ಸ್ಟೈಲ್ ಮಾಡಿಸಿಕೊಂಡಿದ್ದು, ಆ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.
ಶ್ರೀಲಂಕಾದಲ್ಲಿ ನಡೆದ ನಿದಾಹಸ್ ಟ್ರೋಫಿ ಟಿ20 ತ್ರಿಕೋನ ಸರಣಿಯಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ತುಂಬಾ ದಿನಗಳ ನಂತರ ವಿಶ್ರಾಂತಿಗೆ ಮೊರೆ ಹೋಗಿದ್ದರು. ವಿರಾಟ್ ಅನುಪಸ್ಥಿತಿಯಲ್ಲಿ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಟೀಮ್ ಇಂಡಿಯಾವನ್ನು ಮುನ್ನಡೆಸಿ, ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದರು.
ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸಲಿರುವ ವಿರಾಟ್ ಕೊಹ್ಲಿ, ಈ ಬಾರಿಯಾದರೂ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವ ಗುರಿ ಹೊಂದಿದ್ದಾರೆ. 11ನೇ ಆವೃತ್ತಿಯ ಐಪಿಎಲ್ 7ರಂದು ಮುಂಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.

Related Articles