ಜೋಹಾನ್ಸ್‌ಬರ್ಗ್: ಟೀಮ್ ಇಂಡಿಯಾದ ಗಬ್ಬರ್ ಖ್ಯಾತಿಯ ಶಿಖರ್ ಧವನ್, ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ 100ನೇ ಪಂದ್ಯದಲ್ಲಿ ಶತಕ ಬಾರಿಸಿದ ಸ್ಮರಣೀಯ ಸಾಧನೆ ಮಾಡಿದ್ದಾರೆ.
ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ ನ್ಯೂ ವಾಂಡರರ್ಸ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ 4ನೇ ಏಕದಿನ ಪಂದ್ಯದಲ್ಲಿ ಡೆಲ್ಲಿ ಡ್ಯಾಶರ್ ಶಿಖರ್ ಧವನ್ ಈ ಐತಿಹಾಸಿಕ ಸಾಧನೆ ಮಾಡಿದರು. ಅಲ್ಲದೆ 100ನೇ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಭಾರತದ ಮೊಟ್ಟ ಮೊದಲ ಆಟಗಾರನೆಂಬ ದಾಖಲೆ ಬರೆದರು. ಈ ಹಿಂದೆ ಭಾರತದ ಯಾವೊಬ್ಬ ಆಟಗಾರನೂ 100ನೇ ಏಕದಿನ ಪಂದ್ಯದಲ್ಲಿ ಶತಕದ ಸಾಧನೆ ಮಾಡಿರಲಿಲ್ಲ.
ಶತಕದಲ್ಲಿ ಶತಕದ ಇನ್ನಿಂಗ್ಸ್‌ನಲ್ಲಿ 105 ಎಸೆತಗಳನ್ನು ಎದುರಿಸಿದ ಶಿಖರ್ ಧವನ್ 10 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 109 ರನ್ ಗಳಿಸಿ ಔಟಾದರು.