ವೆಂಕಟೇಶ್ ಪ್ರಸಾದ್ ಕೆಎಸ್‌ಸಿಎ ಅಧ್ಯಕ್ಷರಾಗಿ ಆಯ್ಕೆ
ಬೆಂಗಳೂರು: ಚುನಾವಣೆಗೆ ಮುನ್ನವೇ ಭಾರತ ಕ್ರಿಕೆಟ್ ತಂಡದ ಮಾಜಿ ವೇಗಿ, ವೆಂಕಟೇಶ್ ಪ್ರಸಾದ್ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. Former Team India pacer Venkatesh Prasad elected unopposed as KSCA president.
ಅಧ್ಯಕ್ಷ ಆಕಾಂಕ್ಷಿ ಶಾಂತ ಕುಮಾರ್ ಅವರ ಅರ್ಜಿಯು ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ವೆಂಕಟೇಶ್ ಪ್ರಸಾದ್ ಅವರು ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ.
13 ವರ್ಷಗಳ ಹಿಂದೆ ಅನಿಲ್ ಕುಂಬ್ಳೆ ಹಾಗೂ ಜಾವಗಲ್ ಶ್ರೀನಾಥ್ ಅವರ ಆಡಳಿತದಲ್ಲಿ ವೆಂಕಟೇಶ್ ಪ್ರಸಾದ್ ಅವರು ಕೆಎಸ್‌ಸಿಎ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

