ಕೆಎಸ್ಸಿಎ ಚುನಾವಣೆ: ವೆಂಕಿ ಪಡೆಗೆ ಜಯಭೇರಿ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಅವರ ತಂಡ ಜಯ ಗಳಿಸಿದ್ದು, ತಾವು “ಗೇಮ್ ಚೇಂಜರ್” ಎಂಬುದನ್ನು ಸಾಬೀತುಪಡಿಸಿದ್ದಾರೆ. Venkatesh Prasad’s Team Game Changers which bagged four of the five key office-bearer posts in Karnataka State Cricket Association
ವೆಂಕಟೇಶ್ ಪ್ರಸಾದ್ ಅವರು ತಮ್ಮ ಪ್ರತಿಸ್ಪರ್ಧಿ ಪ್ರಜಾವಾಣಿ ಹಾಗೂ ಡೆಕ್ಕನ್ ಹೆರಾಲ್ಡ್ನ ಮಾಜಿ ಸಂಪಾದಕರಾದ ಕೆ.ಎನ್. ಶಾಂತಕುಮಾರ್ ಅವನ್ನು 141 ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಈ ಬಾರಿಯ ಚುನಾವಣೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿತ್ತು. ಮಾಜಿ ಕ್ರಿಕೆಟಿಗ ಸುಜಿತ್ ಸೋಮಸುಂದರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸಂತೋಷ್ ಮೆನನ್ ಕಾರ್ಯದರ್ಶಿಯಾಗಿ ವಿಜಯ ಸಾಧಿಸಿದ್ದಾರೆ. ಭಾರತದ ಶ್ರೇಷ್ಠ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ ಹಾಗೂ ಜಾವಗಲ್ ಶ್ರೀನಾಥ್, ಶಾಂತರಂಗಸ್ವಾಮಿ ಅವರು ವೆಂಕಿ ಪಡೆಯ ಜಯಕ್ಕಾಗಿ ಉತ್ತಮ ರೀತಿಯಲ್ಲಿ ಬೆಂಬಲ ನೀಡಿದ್ದರು.

