Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಮೇ 17-23 ವಿಯಪುರದಲ್ಲಿ ರಾಜ್ಯ ಬ್ಯಾಡ್ಮಿಂಟನ್‌

ವಿಜಯಪುರ: ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್‌ ಸಂಸ್ಥೆಯು ವಿಜಯಪುರ ಜಿಲ್ಲಾಡಳಿತದ ನೆರವಿನಿಂದ ಮೇ 17 ರಿಂದ 23 ರ ವರೆಗೆ ವಿಯಜಪುರದಲ್ಲಿ ರಾಜ್ಯಮಟ್ಟದ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ ನಡೆಯಲಿದೆ. The Karnataka State Badminton Association, with the support of the Vijayapura District Administration, will hold the state-level badminton championship in Vijayapura from May 17 to 23.

ಯೊನೆಕ್ಸ್‌ ಸನ್‌ರೈಸ್‌ ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ 15 & 17 ವರ್ಷ ವಯೋಮಿತಿಯರಿಗಾಗಿ ಚಾಂಪಿಯನ್‌ಷಿಪ್‌ ನಡೆಯಲಿದೆ. ವಿಜಯಪುರದಲ್ಲಿರುವ ಡಾ, ಬಿ, ಆರ್‌ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ 17ರಂದು ಬೆಳಿಗ್ಗೆ 11 ಗಂಟೆಗೆ ಉದ್ಭಾಟನೆಗೊಳ್ಳಲಿದೆ. ಸಚಿವ ಎಂ.ಬಿ. ಪಾಟೀಲ್‌ ಅವರು ಚಾಂಪಿಯನ್‌ಷಿಪ್‌ಗೆ ಚಾಲನೆ ನೀಡುವರು. ಬಿಜಾಪುರ ಶಾಸಕ ಬಸವನಗೌಡ ಪಾಟೀಲ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.  ಕರ್ನಾಟಕ ರಾಜ್ಯ ಬ್ಯಾಡ್ಮಿಂಟನ್‌ ಸಂಸ್ಥೆಯ ಅಧ್ಯಕ್ಷ, ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.  ಸಚಿವ ಶಿವಾನಂದ ಪಾಟೀಲ್‌, ಸಂಸದೆ ಡಾ, ಸುಧಾ ಮೂರ್ತಿ, ಸಂಸದ ರಮೇಶ್‌ ಜಿಗಜಿಣಗಿ, ಜಿಲ್ಲಾಧಿಕಾರಿ ಡಾ. ಆನಂದ್‌ ಕೆ, ಜಿಲ್ಲಾ ಪಂಚಾಯತ್‌ ಸಿಇಒ ರಿಶಿ ಆನಂದ್‌ ಹಾಗೂ ಬಿಜಾಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್‌ ನಿಂಬರಗಿ ಅವರು ಪಾಲ್ಗೊಳ್ಳುವರು.


administrator