Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

10 ಲಕ್ಷ ರೂ. ನೆರವು: ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ  

ಬೆಂಗಳೂರು: ರಾಜ್ಯ ಯುವ ಸಬಲೀರಕಣ ಹಾಗೂ ಕ್ರೀಡಾ ಇಲಾಖೆಯು ಕ್ರೀಡೆಯಲ್ಲಿ ಸಾಧನೆ ಮಾಡುವವರನ್ನು ಗಮನದಲ್ಲಿರಿಸಿಕೊಂಡು ಅವರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹವನ್ನು ನೀಡುವುದಕ್ಕಾಗಿ ಟಾರ್ಗೆಟ್‌ ಒಲಿಂಪಿಕ್ಸ್‌ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿದ್ದು ಕ್ರೀಡಾ ಸಾಧಕರಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಲು 2026, ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ. The State Department of Youth Empowerment and Sports has formulated various schemes, including ‘Target Olympics’, and has invited online applications from sports achievers. The deadline for submitting applications is July 31, 2026.

ಟಾರ್ಗೆಟ್‌ ಒಲಿಂಪಿಕ್ಸ್‌:

ಒಲಿಂಪಿಕ್ಸ್‌ನಲ್ಲಿರುವ ಅಧಿಕೃತ ಕ್ರೀಡೆಗಳಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ರಾಜ್ಯದ 60 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅವರು ಉತ್ತಮ ತರಬೇತಿ ಪಡೆಯಲಿ ಎಂಬ ಉದ್ದೇಶದಿಂದ ವರ್ಷಕ್ಕೆ ತಲಾ 10 ಲಕ್ಷ ರೂ.ಗಳ ನೆರವು ನೀಡುವದು. 2025-26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರನ್ನು ಹೊರತುಪಡಿಸಿ ಇತರರು ಅರ್ಜಿ ಸಲ್ಲಿಸಬಹುದು. [ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

ನಗದು ಪುರಸ್ಕಾರ:

2025ನೇ ಸಾಲಿನಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಪದಕ ಗೆದ್ದಿರುವ ರಾಜ್ಯದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. [ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

ಕ್ರೀಡಾ ವಿದ್ಯಾರ್ಥಿ ವೇತನ:

2025-26ನೇ ಸಾಲಿನಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಗೆದ್ದಿರುವ , ರಾಷ್ಟ್ರ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಭಾಗವಹಿಸಿ/ಪದಕ ಗೆದ್ದಿರುವ 6ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. [ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

ಶೈಕ್ಷಣಿಕ ಶುಲ್ಕ ಮರುಪಾವತಿ:

ರಾಷ್ಟ್ರೀಹ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು ಪದಕ ಗೆದ್ದಿರುವ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ (ವೃತ್ತಿಪರ ಕೋರ್ಸ್‌ ಸೇರಿದಂತೆ) ವಿದ್ಯಾಭ್ಯಾಸದಲ್ಲಿ ನಿರತ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.   

[ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

2025ನೇ ಸಾಲಿನ ಕ್ರೀಡಾ ಪ್ರಶಸ್ತಿ:

ಏಕಲವ್ಯ ಪ್ರಶಸ್ತಿ: ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿರುವ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

[ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

ಜೀವಮಾನ ಸಾಧನೆ ಪ್ರಶಸ್ತಿ: ಸಾಧಕ ಕ್ರೀಡಾಪಟುಗಳನ್ನು ರೂಪಿಸಿದ ರಾಜ್ಯದ ತರಬೇತುದಾರರು.

[ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ: ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳ ಸಾಧಕ ಕ್ರೀಡಾಪಟು.

[ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿ: ರಾಜ್ಯದ ಕ್ರೀಡಾ ಅಭಿವೃದ್ಧಿಗೆ ಕೊಡುಗೆ ನೀಡಿದ ಪೋಷಕ ಕ್ರೀಡಾ ಸಂಸ್ಥೆಗಳಿಗೆ.

[ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in]

ಸೇವಾ ಸಿಂಧೂ ಪೋರ್ರಲ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌: htpps://sevasindhu.karnataka.gov.in

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-07-2026


administrator