Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಅಂತರ್‌ ವಿವಿ ಕ್ರೀಡಾಕೂಟ: ಮೊದಲ ದಿನವೇ ಆಳ್ವಾಸ್‌ನ ಚಿನ್ನದ ಓಟ



ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಹಮ್ಮಿಕೊಂಡ ಐದು ದಿನಗಳ ‘85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಫ್ 2025-26’ ಸೋಮವಾರ ಅಚ್ಚುಕಟ್ಟಾದ ಮೂಲಸೌಕರ್ಯ, ತಾಂತ್ರಿಕ ನಿಖರತೆ, ಸಮಯ ನಿರ್ವಹಣೆ, ಆತಿಥ್ಯ ವ್ಯವಸ್ಥೆಗಳ, ಶಿಸ್ತುಬದ್ಧತೆ, ಅದ್ಧೂರಿ ಮೆರವಣಿಗೆಗಳ ಜೊತೆ ಆರಂಭಗೊಂಡಿತು.  ಕ್ರೀಡಾಕೂಟದ ಮೊದಲ ದಿನವೇ ನಡೆದ 10,000 ಮೀ ಓಟದಲ್ಲಿ ಮಂಗಳೂರು ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್‌ನ ನಿರ್ಮಲಾ ಅವರು ಚಿನ್ನ ಗೆದ್ದರು.

All India Inter University Athletics Championship first day GOLD for Alvas
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆತಿಥ್ಯದಲ್ಲಿ 6ನೇ ಬಾರಿಗೆ (72, 75, 80, 79 ಹಾಗೂ 81) ನಡೆಯುತ್ತಿರುವ 85ನೇ ಕ್ರೀಡಾಕೂಟವನ್ನು ಉದ್ಘಾಟಿಸಿದ ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್  ಮಾತನಾಡಿ,  ‘ಆಳ್ವಾಸ್ ನಲ್ಲಿ  ನಡೆಯುವ ಕ್ರೀಡಾಕೂಟವು ಜಾಗತಿಕ ಕೂಟದ ಮಾದರಿ. ದೇಶದ ಎಲ್ಲ ಕ್ರೀಡಾಕೂಟಗಳಿಗೂ ಹೆಗ್ಗುರುತು’ ಎಂದು ಶ್ಲಾಘಿಸಿದರು. ‘ವಿಶ್ವದ ಸಂಸ್ಕೃತಿಗಳ ಸಾರ ಭಾರತದ ಸಂಸ್ಕೃತಿಗಳ, ಭಾರತದ ಸಂಸ್ಕೃತಿ ಸಾರ ಕರ್ನಾಟಕ, ಕರ್ನಾಟಕದ ಸಂಸ್ಕೃತಿಗಳ ಸಾರ ದಕ್ಷಿಣ ಕನ್ನಡ, ದಕ್ಷಿಣ ಕನ್ನಡದ ಸಂಸ್ಕೃತಿಯ ಸಾರ ಆಳ್ವಾಸ್ ನಲ್ಲಿ’ ಎಂದು ಬಣ್ಣಿಸಿದರು.
ಸತ್ಪ್ರಜೆಗಳ ನಿರ್ಮಿಸುವ ಹಾಗೂ ಬಲಿಷ್ಠ ಭಾರತದ ನಿರ್ಮಾಣದ ಬುನಾದಿ ಈ ಕ್ರೀಡಾಕೂಟ ಎಂದ ಅವರು, ವಿದ್ಯಾರ್ಥಿಗಳೇ  ದೇಶದ ಭವ್ಯ ಭವಿಷ್ಯ ಎಂದರು. ಉದ್ಘಾಟನಾ ಸಂಕೇತವಾಗಿ ತ್ರಿವರ್ಣ ಬೆಲೂನು ಗಾಳಿಗೆ ಹಾರಿ ಬಿಡಲಾಯಿತು. ಕ್ರೀಡಾಜ್ಯೋತಿ ಬೆಳಗಿದ ಬಳಿಕ, ಕ್ರೀಡಾಪಟು ದೀಕ್ಷಿತಾ ರಾಮಕೃಷ್ಣ ಪ್ರತಿಜ್ಞಾ ವಿಧಿ ಬೋಧಿಸಿದರು.


ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ  ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್ ಬಿ.ಸಿ. ವಿಶ್ವವಿದ್ಯಾಲಯದ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಧ್ವಜಾರೋಹಣ ನೆರವೇರಿಸಿದರು.
ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಿಸೀನ್ ಮಾತನಾಡಿ, ಕ್ರೀಡೆ ನಮ್ಮ ಏಕತೆಯ ಸಂಕೇತ. ಕ್ರೀಡಾ ಸ್ಫೂರ್ತಿಯ ಗೆಲುವು ನಮ್ಮದಾಗಬೇಕು. ಆಳ್ವಾಸ್ ಉತ್ತಮ ಶಿಕ್ಷಣ ನೀಡುವ ಸಂಸ್ಥೆಯಾಗಿದೆ. ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಹಾರೈಸಿದರು.
ಕೂಟದ ವೀಕ್ಷಕರಾದ ವಿ.ಶಂಕರ್  ಮಾತನಾಡಿ, ಡಾ. ಆಳ್ವ ಅವರ ಸಾಧನೆ ಅಪರಿಮಿತ. ಈ ರೀತಿ ಬೃಹತ್ ಕೂಟ ಸಂಘಟಿಸಲು ಆಳ್ವಾಸ್ ಗೆ ಮಾತ್ರ ಸಾಧ್ಯ ಎಂದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಭಗವಾನ್ ಬಿ.ಸಿ. ಮಾತನಾಡಿ, ‘ಅತ್ಯುತ್ತಮ  ಆತಿಥ್ಯ, ಸಂಘಟನೆ ಹಾಗೂ ಅಚ್ಚುಕಟ್ಟುತನದ ಸಾಕ್ಷಾತ್ಕಾರದಂತೆ ಡಾ.ಎಂ.ಮೋಹನ ಆಳ್ವ ಕ್ರೀಡಾಕೂಟ ಸಂಘಟಿಸಿದ್ದಾರೆ’ ಎಂದು ಅಭಿನಂದಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಅರ್ಜುನ್, ಮಾಜಿ ಸಚಿವ ಅಭಯಚಂದ್ರ ಜೈನ್ , ಇಫ್ತಿಕರ್ ಅಲಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿಗಳಾದ ವಿವೇಕ್ ಆಳ್ವ, ಡಾ.ವಿನಯ್ ಆಳ್ವ ಮತ್ತಿತರರು ಇದ್ದರು.
ಕ್ರೀಡಾಕೂಟದಲ್ಲಿ ದೇಶದ 324ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ನಾಲ್ಕು ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಹಾಗೂ ಸುಮಾರು 1000 ಕ್ರೀಡಾಧಿಕಾರಿಗಳು ಪಾಲ್ಗೊಂಡಿದ್ದಾರೆ.

ಮನ ಸೆಳೆದ ಮೆರವಣಿಗೆ: ಭಾರತೀಯ ಕಲಾ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ ಮೆರವಣಿಗೆಯು, ಕ್ರೀಡಾಕೂಟದ ಉದ್ಘಾಟನೆಯಲ್ಲಿ  ಗಮನ ಸಳೆಯಿತು. ದೇಶದ ವೈವಿಧ್ಯತೆಯನ್ನು ಅಭಿವ್ಯಕ್ತಿಸಿದ ಮೆರವಣಿಗೆಯು ಉತ್ತಮ ನಾಳೆಗಾಗಿ ಕ್ರೀಡೆ,  ಶಿಕ್ಷಣ, ಸಂಸ್ಕೃತ ಎಂಬ ಸಂದೇಶವನ್ನು ಸಾರಿತು.
ಶುಭಸೂಚಕವಾದ ಸಾಂಪ್ರದಾಯಿಕ ಕೊಂಬು ವಾದನ, ಗಣಪತಿ ಪ್ರತಿರೂಪ, ಕೊಡೆಗಳನ್ನು ಹಿಡಿದ ವಿದ್ಯಾರ್ಥಿನಿಯರು, ಘಟೋತ್ಕಜ ರೂಪ, ಊರಿನ ಚೆಂಡೆ, ಪೂರ್ಣಕುಂಭ ಹಿಡಿದ ಸ್ತಿçÃಯರು, ಮಣಿಪುರ ಸಂಸ್ಕ್ರತಿ, ತಟ್ಟಿರಾಯ, ಕಿಂಗ್ಕಾAಗ್, ಮರಗಾಲು, ತಮಟೆವಾದನ ಆಂಜನೇಯ, ಲಂಗದಾವಣಿ ಹುಡುಗಿಯರು, ರಾಮ, ಯಕ್ಷಗಾನ ವೇಷಧಾರಿಗಳು, ತೆಂಕು ಹಾಗೂ ಬಡಗು ಯಕ್ಷಗಾನ, ವರಾಹ, ಸ್ಯಾಕ್ಸೋಫೋನ್ ವಾದನ, ವೆಂಕಟರಮಣ, ಪುರುಷರ ನಗಾರಿ, ಮಹಿಳೆಯರ ನಗಾರಿ, ನರಸಿಂಹ, ದಪ್ಪು, ಹಿಮಕರಡಿ, ಡೊಳ್ಳುಕುಣಿತ, ನಂದಿ, ಕೊಂಚಾಡಿ ಚೆಂಡೆ, ಕಾಟಿ, ಬ್ಯಾಂಡ್ ಸೆಟ್, ಆಳ್ವಾಸ್ ಗೊಂಬೆ ಬಳಗ, ಶಿಲ್ಪಾ ಗೊಂಬೆ ಬಳಗ, ಹೊನ್ನಾವರ ಬ್ಯಾಂಡ್, ಏಂಜೆಲ್ಸ್,  ಸಂತಕ್ಲಾಸ, ನಾಸಿಕ್ ಬ್ಯಾಂಡ್,  ಡೊಳ್ಳು ಕುಣಿತ, ಶಿಂಗಾರಿ ಮೇಳ, ಪಲ್ಲಕಿ, ಎನ್‌ಸಿಸಿಯ ಭೂ, ವಾಯು ಮತ್ತು ನೌಕಾಪಡೆ ಹಾಗೂ ಸ್ಕೌಟ್ಸ್  ಆ್ಯಂಡ್ ಗೈಡ್ಸ್, ರೋವರ್ಸ್ ಆ್ಯಂಡ್ ರೇಂಜರ್ಸ್ ವಿದ್ಯಾರ್ಥಿಗಳ ಪಥಸಂಚಲನ ಮೆರುಗು ನೀಡಿದವು.  ಟ್ರೋಫಿಯನ್ನು ಪಲ್ಲಕ್ಕಿಯಲ್ಲಿ ತರಲಾಯಿತು.
ಇದಕ್ಕೂ ಮೊದಲು ಕ್ರೀಡಾಕೂಟದಲ್ಲಿ ಪಾಲ್ಗೊಂಡ ಎಲ್ಲ ವಿಶ್ವವಿದ್ಯಾಲಯಗಳ ಕ್ರೀಡಾಪಟುಗಳ ಪಥಸಂಚಲನ ನಡೆಯಿತು. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಫರೀದ್ ಗೌರವ ರಕ್ಷೆ ಸ್ವೀಕರಿಸಿದರು.
ಮಹಿಳಾ ಕಬಡ್ಡಿ ವಿಶ್ವಕಪ್ ವಿಜೇತ ಭಾರತೀಯ ತಂಡ ಪ್ರತಿನಿಧಿಸಿದ ಧನಲಕ್ಷ್ಮೀ ಅವರನ್ನು ಸನ್ಮಾನಿಸಲಾಯಿತು. ಬಳಿಕ ಸಿಡಿಮದ್ದಿನ ಪ್ರದರ್ಶನವು ಆಗಸದಲ್ಲಿ ಚಿತ್ತಾರ ಮೂಡಿಸಿತು. ರಾಜೇಶ್ ಡಿಸೋಜಾ, ವೇಣುಗೋಪಾಲ್, ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು.


administrator