Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಬೆಂಗಳೂರಿನಲ್ಲಿ ಅಖಿಲ ಭಾರತ ಅಂತರ್‌ ವಿವಿ ಬಾಲ್‌ ಬ್ಯಾಡ್ಮಿಂಟನ್‌

ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಮರಾತಹಳ್ಳಿಯ ನ್ಯೂ ಹಾರಿಜಾನ್‌ ಕಾಲೇಜು ಆಶ್ರಯದಲ್ಲಿ  ಮಾರ್ಚ್‌ 14 ರಿಂದ 16 ರ ವರೆಗೆ ಅಖಿಲ ಭಾರತ ಅಂತರ್‌‌ ವಿಶ್ವವಿದ್ಯಾನಿಲಯ ಬಾಲ್‌ ಬ್ಯಾಡ್ಮಿಂಟನ್‌ ಟೂರ್ನಿ ನಡೆಯಲಿದೆ. All India Inter University Ball Badminton Men Championship at New Horizon College, Marathalli, Bangalore

ಭಾರತೀಯ ವಿಶ್ವವಿದ್ಯಾನಿಲಯಗಳ ಒಕ್ಕೂಟ Association of Indian Universities (AIU) New Delhi ಆಶ್ರಯದಲ್ಲಿ ನಡೆಯಲಿರುವ ಈ ಚಾಂಪಿಯನ್‌ಷಿಪ್‌ನಲ್ಲಿ 84 ವಿಶ್ವವಿದ್ಯಾನಿಲಯಗಳು ಪಾಲ್ಗೊಳ್ಳಲಿವೆ. ಲೀಗ್‌ ಹಾಗೂ ನಾಕೌಟ್‌ ಮಾದರಿಯಲ್ಲಿ ನಡೆಯಲಿರುವ ಈ ಚಾಂಪಿಯನ್‌ಷಿಪ್‌ ಕರ್ನಾಟಕ ರಾಜ್ಯ ಬಾಲ್‌ಬ್ಯಾಡ್ಮಿಂಟನ್‌ ಸಂಸ್ಥೆ ಹಾಗೂ ಭಾರತೀಯ ವಿಶ್ವವಿದ್ಯಾನಿಲಯಗಳ ಒಕ್ಕೂಟದ ನಿಯದಂತೆ ನಡೆಯಲಿದೆ. ಮೊದಲ ನಾಲ್ಕು ಸ್ಥಾನ ಗಳಿಸುವ ತಂಡಗಳಿಗೆ ಟ್ರೋಫಿ ನೀಡಲಾಗುವುದು ಹಾಗೂ ವೈಯಕ್ತಿಕ ವಿಭಾಗದಲ್ಲೂ ಟ್ರೋಫಿ ನೀಡಲಾಗುವುದು. 1000ಕ್ಕೂ ಹೆಚ್ಚು ಆಟಗಾರರು ಹಾಗೂ ತರಬೇತುದಾರರು, ಅಫೈರ್‌ಗಳು ಹಾಆಗೂ ಮ್ಯಾನೇಜರ್‌ಗಳು ಸೇರಿದಂತೆ 80ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.

ಮಾರ್ಚ್‌ 14 ರಂದು ಬೆಳಿಗ್ಗೆ 11 ಗಂಟೆಗೆ ಚಾಂಪಿಯನ್‌ಷಿಪ್‌ ಉದ್ಘಾಟನೆಗೊಳ್ಳಲಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ನಿರಂಜನ ವಾನಳ್ಳಿ, ಬೆಂಗಳೂರು ಉತ್ತರ ವಿಶ್ವನಿದ್ಯಾನಿಲಯದ ರಿಜಿಸ್ಟ್ರಾರ್‌ ಸಿ.ಎನ್.‌ ಶ್ರೀಧರ್‌, ಎನ್‌ಎಚ್‌ಇಐನ ಚೇರ್ಮನ್‌ ಡಾ. ಮೊಹನ್‌ ಮಂಘ್ನಾನಿ, ನ್ಯೂ ಹಾರಿಜಾನ್‌‌ ಕಾಲೇಜಿನ ಪ್ರಾಂಶುಪಾಲ ಡಾ. ಬೋಧಿಸತ್ವ ಮೊದಲಾದ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಾರ್ಚ್‌ 16 ರ ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಶ್ರೀಕಾಂತ್‌ ಆರ್‌. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


administrator