Thursday, December 12, 2024

ಜಿಲ್ಲಾಮಟ್ಟದಬಾಲ್ಬ್ಯಾಡ್ಮಿಂಟನ್: ಆಳ್ವಾಸ್‌ಗೆ 19ನೇಬಾರಿಗೆಅವಳಿಪ್ರಶಸ್ತಿ


 
ಮೂಡುಬಿದಿರೆ:
 ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು ಹಾಗೂ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ಇವರ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಬಾಲಕರ ಮತ್ತು ಬಾಲಕಿಯರ ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದಿರುವ ಆಳ್ವಾಸ್‌ ಕಾಲೇಜು ತಂಡ 19ನೇ ಬಾರಿಗೆ ಅವಳಿ ಪ್ರಶಸ್ತಿ ಮುಡಿಗೇರಿಸಕೊಂಡಿದೆ. Alva’s College Moodabidri won the ball badminton double crown for 19th time.

ಬಾಲಕರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ತಂಡವನ್ನು 35-20, 35-5 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು ಸುಳ್ಯ ತಂಡವನ್ನು 35-12, 35-10 ಅಂಕಗಳಿAದ ಸೋಲಿಸಿ 19ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಆಳ್ವಾಸ್ ಬಾಲಕರ ವಿಭಾಗದಲ್ಲಿ ಆಕಾಶ್ ಉತ್ತಮ ರಕ್ಷಣಾಕಾರ, ಲಿಖಿತ್ ಉತ್ತಮ ಆಕ್ರಮಣಕಾರ ಹಾಗೂ ಬಾಲಕಿಯರ ವಿಭಾಗದಲ್ಲಿ ಲಾಂಛನ ಉತ್ತಮ ರಕ್ಷಣಾಕಾರ‍್ತಿ, ಶಾಲಿನಿ ಉತ್ತಮ ಆಕ್ರಮಣಕಾರ್ತಿ ಪ್ರಶಸ್ತಿ ಪಡೆದರು.
  ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.

Related Articles