Thursday, September 12, 2024

ಬೆಳ್ಳಿಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೇಸಿಗೆ ಶಿಬಿರ

ಸ್ಪೋರ್ಟ್ಸ್ ಮೇಲ್ ವರದಿ

ಲೆದರ್‌ಬಾಲ್ ಕ್ರಿಕೆಟ್‌ನಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕೆಂಬ ಹಂಬಲ ಅನೇಯಕ ಯುವ ಕ್ರಿಕೆಟಿಗರಲ್ಲಿ ಮನೆಮಾಡಿಕೊಂಡಿರುತ್ತದೆ. ಆದರೆ ಉತ್ತಮ ತರಬೇತಿ ಸಿಗದೆ ಆ ಹಂಬಲ ಈಡೇರಿರುವುದಿಲ್ಲ.

ಆದರೆ ಈ ಬಾರಿ ಕರಾವಳಿಯ ಯುವ ಕ್ರಿಕೆಟಿಗರಿಗೆ ಹೆಚ್ಚಿನ ಅನುಕೂಲವಾಗಲಿ ಎಂದು ಕರ್ನಾಟಕದ ಮಾಜಿ ಕ್ರಿಕೆಟಿಗ, ಮಂಗಳೂರು ವಿಶ್ವವಿದ್ಯಾನಿಲಯ ಕ್ರಿಕೆಟ್ ತಂಡದ ಮಾಜಿ ನಾಯಕ ವಿಜಯ್ ಆಳ್ವಾ ಅವರು ಸಾಸ್ತಾನದ ಹಂಗಾರಕಟ್ಟೆ ಸಮೀಪದ ಚೇತನ ಪ್ರೌಢ ಶಾಲೆಯ ಅಂಗಣದಲ್ಲಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. ಬಿ.ಡಿ, ಶೆಟ್ಟಿ ಕಾಮರ್ಸ್ ಮತ್ತು ಬಿಸಿನೆಸ್ ಮ್ಯಾನೇಜ್‌ಮೆಂಟ್ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಈ ತರಬೇತಿ ಶಿಬಿರ ನಡೆಯಲಿದೆ.
4ನೇ ತರಗತಿಯಿಂದ 10ನೇ ತರಗತಿಯೊಳಗೆ ವ್ಯಾಸಂಗ ಮಾಡುತ್ತಿರುವ ಈ ಪರಿಸರದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಏಪ್ರಿಲ್ 6 ರಿಂದ ಶಿಬಿರ ಆರಂಭಗೊಳ್ಳಲಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಿಂದ ತರಬೇತಿ ಪಡೆದ ನುರಿತ ತರಬೇತುದಾರರು  ಇಲ್ಲಿ ಮಕ್ಕಳಿಗೆ ತರಬೇತಿ ನೀಡಲಿದ್ದಾರೆ. ಕರ್ನಾಟಕದಲ್ಲಿ ಈಗ 5,000ಕ್ಕೂ ಹೆಚ್ಚು ಕ್ರಿಕೆಟಿಗರಿದ್ದಾರೆ. ಆದರೆ ಅವಕಾಶ ಸಿಗುವುದು ಕೆಲವರಿಗೆ ಮಾತ್ರ. ಕ್ರಿಕೆಟ್ ಅಥವಾ ಯಾವುದೇ ಕ್ರೀಡೆಯಾಗಲಿ ಅದನ್ನು ವೃತ್ತಿಪರತೆಯ ರೀತಿಯಲ್ಲಿ ತರಬೇತಿ ಪಡೆದು, ನಿತ್ಯ ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಆ ಕ್ರೀಡೆಯಲ್ಲಿ ಯಶಸ್ಸು ಕಾಣಲು ಸಾಧ್ಯ. ಈ ರೀತಿ ವೃತ್ತಿಪರ ತರಬೇತಿಯನ್ನು ನೀಡಲಿದೆ ಬೆಳ್ಳಿಪಾಡಿ ಆಳ್ವಾಸ್ ಕ್ರಿಕೆಟ್ ಅಕಾಡೆಮಿ. ಹೆಚ್ಚಿನ ವಿವರಗಳಿಗೆ 8217289848 ಅಥವಾ  9449315300 ಸಂಪರ್ಕಿಸಬಹುದು.

Related Articles