Friday, April 19, 2024

ಟಾರ್ಪೆಡೋಸ್ ಟಿ10 ಬ್ಯಾಶ್‌ಗೆ ಸಂಭ್ರಮದ ಚಾಲನೆ

ಸ್ಪೋರ್ಟ್ಸ್ ಮೇಲ್ ವರದಿ 

ಕರ್ನಾಟಕದ ಪ್ರತಿಷ್ಠಿತ ಕ್ರೀಡಾ ಸಂಸ್ಥೆಗಳಲ್ಲಿ ಒಂದಾಗಿರುವ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ.) ಆಯೋಜಿಸಿರುವ ಟಿ10 ಬ್ಯಾಶ್‌ಗೆ ಗುರುವಾರ ಇಲ್ಲಿನ ಎನ್‌ಎಂಪಿಟಿಯ  ಡಾ. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಬ್ಬರದ  ಚಾಲನೆ ಸಿಕ್ಕಿತು. ಮಾಜಿ ಸಚಿವ, ಕೃಷ್ಣ ಜೆ. ಪಾಲೇಮಾರ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಮಾನಸಿಕ ಹಾಗೂ ದೈಹಿಕ ಸಾಮಾರ್ಥ್ಯವನ್ನು ಕಾಯ್ದುಕೊಳ್ಳುವುದಕ್ಕಾಗಿ ಕ್ರೀಡೆಯಲ್ಲಿ ತೊಡಗಿಕೊಳ್ಳುವುದು ಅಗತ್ಯವಾಗಿದೆ. ಅದು ಕೇವಲ ಯುವಕರಿಗೆ ಮಾತ್ರವಲ್ಲ. ವಯಸ್ಸಾದವರು ಕೂಡ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಈ ನಿಟ್ಟಿನಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾ ಸಾಧಕರನ್ನು ಗಮನಿಸಿದಾಗ ಆ ಸಾಧಕರಲ್ಲಿ ಹೆಚ್ಚಿನವರು ಗ್ರಾಮೀಣ ಭಾಗದಿಂದ ಬಂದವರಾಗಿರುತ್ತಾರೆ. ಆದ್ದರಿಂದ ಗ್ರಾಮೀಣ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು,‘ ಎಂದು ಮಾಜಿ ಸಚಿವರು ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎನ್‌ಐಟಿಕೆ ಸುರತ್ಕಲ್‌ನ ಸ್ಟೂಡೆಂಟ್ಸ್ ಐರ್ಸ್ ವಿಭಾಗದ ಡೀನ್, ಡಾ. ಜಗನ್ನಾಥ್ ನಾಯಕ್ ಮಾತನಾಡಿ, ‘ಆಟದಲ್ಲಿ ಸೋಲು ಗೆಲುವು ಇದ್ದದ್ದೇ, ಕ್ರೀಡಾಪಟುಗಳು ಅದನ್ನು ಅತ್ಯಂತ ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಬೇಕು. ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಗೌತಮ್ ಶೆಟ್ಟಿ ಅವರು ಹಲವಾರು ಕ್ರೀಡಾ ಚಟುವಟಿಕೆಗಳನ್ನು ನಡೆಸುತ್ತಿರುತ್ತಾರರೆ. ಅವರ ಈ ಕ್ರೀಡಾ ಸ್ಫೂರ್ತಿಗೆ ಎನ್‌ಐಟಿಗೆ ಎಲ್ಲ ರೀತಿಯಲ್ಲೂ ನೆರವು ನೀಡುತ್ತಿದೆ. ಅವರ ಕ್ರೀಡಾ ಕಾಳಜಿ ನಿಜವಾಗಿಯೂ ಸ್ತುತ್ಯರ್ಹ,‘ ಎಂದರು.
ಎಂಆರ್‌ಪಿಎಲ್‌ನ ಜನರಲ್ ಮ್ಯಾನೇಜರ್ ಸತ್ಯನಾರಾಯಣ ಕ್ರೀಡಾಪಟುಗಳಿಗೆ ಶುಭ  ಹಾರೈಸಿದರು.
ಪಾಕಿಸ್ತಾನದ ಸೇನೆಯ ವಶದಲ್ಲಿರುವ ಭಾರತದ ವಾಯುಪಡೆಯ ವಿಂಗ್ ಕಮಾಂಡರ್ ಅವರ ಬಿಡುಗಡೆಗಾಗಿ ದೇಶವೇ ಪ್ರಾರ್ಥಿಸುತ್ತಿದೆ. ಈ ಸಂದರ್ಭದಲ್ಲಿ ಭಾರತದ ಸೇನಾ ವಿಭಾಗದ ಇಬ್ಬರ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ಪರ್ಧಿಗಳಲ್ಲಿ ಹೊಸ ಉಲ್ಲಾಸ ತರುವಂತೆ ಮಾಡಿದರು.  ಎನ್‌ಎಂಪಿಟಿಯ ಕಾರ್ಯದರ್ಶಿ ಲೆಫ್ಟಿನೆಂಟ್ ಕರ್ನಲ್ ಬಿಜು ವಾರಿಯರ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಮನೀಶ್ ಈ ಸಂದ‘ರ್ದಲ್ಲಿ ಪಾಲ್ಗೊಂಡಿರುವ ಆಟಗಾರರನ್ನು ಉದ್ದೇಶಿಸಿ ಮಾತನಾಡಿದರು. ಎನ್‌ಎಂಪಿಟಿ ಸ್ಪೋರ್ಟ್ಸ್ ಕೌನ್ಸಿಲ್ ಕಾರ್ಯದರ್ಶಿ ಹಾಗೂ ಮಾಜಿ ಕ್ರಿಕೆಟಿಗ ಕರ್ನಲ್ ಎಂ.ಎ. ರಾಜ್ ಮನ್ನಾರ್ ಕ್ರೀಡಾ ಸ್ಫೂರ್ತಿಯ ಕುರಿತು ಮಾತನಾಡಿದರು.
ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಹಾಗೂ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್‌ನ ಗೌರವ ಸದಸ್ಯರಾಗಿರುವ ಪ್ರತಿ‘ಾ ಕುಳಾಯಿ ಮಾತನಾಡಿ, ಇಂದಿನ ಕಾರ್ಯಕ್ರಮದಲ್ಲಿ ಇಬ್ಬರು ಯೋಧರು ಪಾಲ್ಗೊಂಡಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಹೇಳಿದರು.
ಈ ಶುಭ ಸಂದರ್ಭದಲ್ಲಿ ಇದುವರೆಗೂ ಕ್ರೀಡಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಕ್ರೀಡಾ ಸಾ‘ಕರನ್ನು ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಎನ್‌ಎಂಪಿಟಿ ಶಿವಾನಂದ, ಸಿಂಡಿಕೇಟ್ ಬ್ಯಾಂಕ್‌ನ ಸುಧಾಕರ್ ಎಂ., ಕ್ರೀಡಾ ಏಳ್ಗೆಗಾಗಿ ಹಲವಾರು ವರ್ಷಗಳಿಂದ ದುಡಿಯುತ್ತಿರುವ ಕೆ. ಬಾಲಕೃಷ್ಣ ಪೈ (ಪೈ ಮಾಮ್), ಎಐಟಿಕೆಯ ದೈಹಿಕ ಶಿಕ್ಷಣ ನಿರ್ದೇಶಕ ಪ್ರಭಾಕರ ಶೆಟ್ಟಿ, ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ಅವರ ನೆಚ್ಚಿನ ಅಭಿಮಾನಿ ಕ್ರಿಕೆಟಿಗ ಶಂಕರ್ ಗೀತಾ ಅವರನ್ನು ಈ ಸಂದರ್ಭದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ರಾಜ್ಯ ಯುವಜನ ಸೇವಾ ಕ್ರೀಡಾ ಇಲಾಖೆಯ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್  ಅವರು ದಿನದ ಮೊದಲ ಎರಡು ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದ ಆಟಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್‌ನ  ಅಧ್ಯಕ್ಷ ಕೆ. ಗೌತಮ್ ಶೆಟ್ಟಿ ಅವರು ಪ್ರಾಸ್ತವಿಕ ಮಾತನಾಡಿ, ಅತಿಥಿಗಳನ್ನು ಸ್ವಾಗತಿಸಿ, ವಂದನೆ ಸಲ್ಲಿಸಿದರು.

Related Articles