Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಆಳ್ವಾಸ್‌ನ ಧನಲಕ್ಷ್ಮೀ ಪೂಜಾರಿ ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಆಯ್ಕೆ


ಮೂಡುಬಿದಿರೆ: 
ಆಳ್ವಾಸ್ ಸ್ಪೋರ್ಟ್ಸ ಕ್ಲಬ್‌ನ ಪ್ರತಿಭಾನ್ವಿತ ಕಬಡ್ಡಿ ಆಟಗಾರ್ತಿ ಧನಲಕ್ಷ್ಮೀ ಪೂಜಾರಿ, ಭಾರತದ ರಾರಾಷ್ಟ್ರೀಯ ಕಬ್ಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.  Dhanalakshmi Poojary, a talented kabaddi player from Alva’s Sports Club, has been selected for the Indian national kabaddi team.

ಇವರು ನವೆಂಬರ್ 15ರಿಂದ 25 ರವರೆಗೆ ಬಾಂಗ್ಲಾದೇಶದ ಡಾಕಾದಲ್ಲಿ ನಡೆಯಲಿರುವ ಎರಡನೇ ಮಹಿಳಾ ಕಬಡ್ಡಿ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.  ಧನಲಕ್ಷ್ಮೀ, ದಕ್ಷಿಣ ಭಾರತದಿಂದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಏಕೈಕ ಆಟಗಾರ್ತಿಯಾಗಿದ್ದಾರೆ. ತನ್ನ ಆಲ್‌ರೌಂಡರ್ ಆಟದಿಂದ ತಂಡದಲ್ಲಿ ಬಹುಬೇಡಿಕೆಯ ಕ್ರೀಡಾಪಟುವಾಗಿದ್ದಾರೆ. ಧನಲಕ್ಷ್ಮೀ  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಪದವಿಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯೊಂದಿಗೆ ಡಿಪ್ಲೋಮಾ ಕೋರ್ಸಗಳನ್ನು ಸಂಪೂರ್ಣ ಕ್ರೀಡಾ ದತ್ತು ಶಿಕ್ಷಣ ಯೋಜನೆಯಲ್ಲಿ ಉಚಿತವಾಗಿ ಪಡೆದಿದ್ದಾರೆ.
ಇವರು ಜೂನಿಯರ್ ನ್ಯಾಷನಲ್, ಸೀನಿಯರ್ ನ್ಯಾಷನಲ್ ಹಾಗೂ ಫೆಡರೇಷನ್ ಕಪ್‌ನಲ್ಲಿ ಒಟ್ಟು 12 ಬಾರಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. ಈಗಾಗಲೇ ಸೀನಿಯರ್ ಹಾಗೂ ಜೂನಿಯರ್ ವಿಭಾಗದಲ್ಲಿ 4 ಬಾರಿ ರಾರಾಷ್ಟ್ರೀಯ ತರಬೇತಿ ಶಿಬಿರದಲ್ಲಿ ಭಾಗವಹಿಸಿರುತ್ತಾರೆ.  ಪ್ರಸ್ತುತ ಗುಜರಾತಿನ ಗಾಂಧಿನಗರದಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದಲ್ಲಿ ಅಂತಿಮ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.  ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್  ಹಾಗೂ ದಕ್ಷಿಣಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಸಹಕಾರ ಸ್ಮರಿಸಲಾಗಿದೆ.


ನಮ್ಮ ವಿದ್ಯಾರ್ಥಿನಿ ಧನಲಕ್ಷ್ಮಿ ರಾಷ್ಟ್ರ ತಂಡಕ್ಕೆ ಆಯ್ಕೆಯಾಗಿರುವುದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪರವಾಗಿ ಅಪಾರ ಹೆಮ್ಮೆಯ ಕ್ಷಣ. ಕ್ರೀಡೆ ಮತ್ತು ಶಿಕ್ಷಣದ ಸಮನ್ವಯದ ನಮ್ಮ ‘ಕ್ರೀಡಾ ದತ್ತು ಶಿಕ್ಷಣ ಯೋಜನೆ’ಯ ಯಶಸ್ಸಿಗೆ ಇದು ಶ್ರೇಷ್ಠ ಉದಾಹರಣೆ. ದಕ್ಷಿಣ ಭಾರತದ ಏಕೈಕ ಪ್ರತಿನಿಧಿಯಾಗಿ ಆಕೆಯ ಆಯ್ಕೆ ಪ್ರತಿಭೆ, ಪರಿಶ್ರಮ ಮತ್ತು ಶಿಸ್ತಿನ ಪ್ರತಿಫಲ. ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸುತ್ತಾ, ಆಕೆಯು ದೇಶದ ಕೀರ್ತಿಯನ್ನು ವಿಶ್ವ ವೇದಿಕೆಯಲ್ಲಿ ಉನ್ನತ ಮಟ್ಟಕ್ಕೆ ಏರಿಸಲಿ ಎಂಬದೇ ಹಾರೈಕೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ   ಡಾ. ಎಂ. ಮೋಹನ ಆಳ್ವ ಅವರು ಶುಭ ಹಾರೈಸಿದ್ದಾರೆ.


administrator