Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ಚಿನ್ನಸ್ವಾಮಿ ಆಡಲು ಚೆನ್ನಾಗಿದೆ…. Let’s Play On

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ನಡೆಯುವುದಿಲ್ಲವೆಂದರೆ ಅದು ರಾಜ್ಯಕ್ಕೆ ಮಾತ್ರ ನಷ್ಟವಲ್ಲ, ಇಡೀ ದೇಶಕ್ಕೆ ನಷ್ಟವೆಂಬುದು ಕ್ರಿಕೆಟ್‌ ಜಗತ್ತಿಗೇ ಗೊತ್ತಿದೆ. ಇದನ್ನರಿತ ಕಾಂಗ್ರೆಸ್‌ ಸರಕಾರ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಚಿವ ಸಂಪುಟ ಸಭೆಯಲ್ಲಿ ಕ್ರಿಕೆಟ್‌ ಜಗತ್ತಿನ ಪ್ರಸಿದ್ಧ ಕ್ರೀಡಾಂಗಣಗಳಲ್ಲಿ ಒಂದಾಗಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಿದೆ. Karnataka Cabinet Reportedly Approves Cricket Matches at Chinnaswamy Stadium with Safety Riders.

ಕರ್ನಾಟಕ ಕ್ರಿಕೆಟ್‌ ಸಂಸ್ಥೆಯ ನೂತನ ಅಧ್ಯಕ್ಷ, ಮಾಜಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಅವರು ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಜಯ ಗಳಿಸಿದ ನಂತರ ಮೊದಲು ಮಾಡಿದ ಕೆಲಸ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರನ್ನು ಭೇಟಿಯಾದರು. ಕ್ರಿಕೆಟ್‌ ನಿಂತು ಹೋದರೆ ರಾಜ್ಯ ಯಾವರೀತಿಯಲ್ಲಿ ನಷ್ಟವಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ನೀಡಿ, ಮನದಟ್ಟು ಮಾಡಿದರು. ಜೊತೆಯಲ್ಲಿ ಕೆಎಸ್‌ಸಿಎ ಕಾರ್ಯದರ್ಶಿ ಸಂತೋಷ್‌ ಮೆನನ್‌, ಉಪಾಧ್ಯಕ್ಷರಾದ ಮಾಜಿ ಕ್ರಿಕೆಟಿಗ ಸುಜಿತ್‌ ಸೋಮಸುಂದರ್‌ ಹಾಗೂ ಗೇಮ್‌ ಚೇಂಜರ್ಸ್‌ ತಂಡದ ಪ್ರಮುಖ ಹಾಗೂ ಕೆಎಸ್‌ಸಿಎ ಮಾಜಿ ಖಜಾಂಚಿ ವಿನಯ್‌ ಮೃತ್ಯುಂಜ ಅವರು ಹಾಜರಿದ್ದರು. ಈ ನಿಯೋಗದ ಜೊತೆ ಮಾತುಕತೆ ನಡೆಸಿದ ಬಳಿಕ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಚಿವ ಸಂಪುಟದ ಮಂತ್ರಿಗಳೊಂದಿಗೆ ಚರ್ಚಿಸಿ ಕ್ರಿಕೆಟ್‌ಗೆ ಅನುವು ಮಾಡಿಕೊಡುವ ತೀರ್ಮಾನ ಕೈಗೊಂಡರು.

ರಾಯಜ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಕಳೆದ ಬಾರಿಯ ಐಪಿಎಲ್‌‌ ಗೆದ್ದ ನಂತರ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರ್ಘಟನೆಯಲ್ಲಿ 12 ಮಂದಿ ಮೃತಪಟ್ಟಿದ್ದರು. ಅಂದಿನಿಂದ ಈ ಅಂಗಣದಲ್ಲಿ ಪಂದ್ಯಗಳು ನಡೆಯುತ್ತಿಲ್ಲ. ಆದರೆ, ಇದೀಗ ಪಂದ್ಯ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.


administrator