ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನು ನಡೆಸಲು ಸರಕಾರ ಗ್ರೀನ್ ಸಿಗ್ನಲ್
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್‌ಸಿಎ) ಕರ್ನಾಟಕ ಸರ್ಕಾರದ ಗೃಹ ಇಲಾಖೆ ಅನುಮತಿ ನೀಡಿದೆ. Karnataka Govt. granted permission to the KSCA to host international and IPL matches at the iconic M. Chinnaswamy Stadium Bengaluru
ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದ ನಿರ್ದಿಷ್ಟ ನಿಯಮಗಳು ಮತ್ತು ಷರತ್ತುಗಳಿಗೆ ಈ ಅನುಮತಿ ಒಳಪಟ್ಟಿರುತ್ತದೆ.
ಎಲ್ಲಾ ನಿಗದಿತ ಷರತ್ತುಗಳನ್ನು ಪೂರೈಸುವ ವಿಶ್ವಾಸ ಕೆಎಸ್‌ಸಿಎ ಹೊಂದಿದೆ. ಸಂಸ್ಥೆಯು ಈಗಾಗಲೇ ತಜ್ಞರ ಪರಿಶೀಲನಾ ಸಮಿತಿಯ ಮುಂದೆ ವಿವರವಾದ ಅನುಸರಣೆ ಮಾರ್ಗಸೂಚಿಯನ್ನು ಮಂಡಿಸಿದೆ ಮತ್ತು ಎಲ್ಲಾ ಸುರಕ್ಷತೆ, ಭದ್ರತೆ ಮತ್ತು ಜನಸಂದಣಿ ನಿರ್ವಹಣಾ ಕ್ರಮಗಳನ್ನು ಅಕ್ಷರಶಃ ಜಾರಿಗೆ ತರಲು ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಕೆಎಸ್‌ಸಿಎ ಮಾಧ್ಯಮ ಪ್ರಕಟಣೆ ತಿಳಿಸಿದೆ,

