ಬೆಂಗಳೂರು: ಬೆಂಗಳೂರು ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ಸಬ್ ಜೂನಿಯರ್ ಬಾಲಕರ ಫುಟ್ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಮಣಿಪುರದ ವಿರುದ್ಧ 5-1 ಗೋಲುಗಳ ಅಂತರದಲ್ಲಿ ಗೆದ್ದ ಕರ್ನಾಟಕ ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಗೆದ್ದುಕೊಂಡಿದೆ. Karnataka won first ever National Sub Junior Football Championship.
ಕರ್ನಾಟಕದ ಪರ ಸಿ.ಎಚ್ ಸಾಕಿಬ್ 8, 27 ಮತ್ತು 65ನೇ ನಿಮಿಷಗಳಲ್ಲಿ ಗೋಲು ಗಳಿಸಿದರೆ, ರಿಶಾನ್ ಚೌಧರಿ 44ನೇ ನಿಮಿಷ ಹಾಗೂ ಅರವಿಂದ್ರನ್ ಸಮ್ವಾಂಕಿ ಲಾಟೋ 85ನೇ ನಿಮಿಷದಲ್ಲಿ ಗೋಲು ಗಳಿಸಿ ಜಯದ ರೂವಾರಿ ಎನಿಸಿದರು. ಮಣಿಪುರದ ಪರ ಖುಥೈಫಾಮ್ ಮುಕ್ತಾರ್ ರೆಹಮಾನ್ 34ನೇ ನಿಮಿಷದಲ್ಲಿ ಗಳಿಸಿದ ಗೋಲು ಸೋಲಿನ ಅಂತರವನ್ನು ಕಡಿಮೆ ಮಾಡಿತು.
ಶಾಂತಿನಗರ ಶಾಸಕ, ಅಖಿಲ ಭಾರತ ಫುಟ್ಬಾಲ್ ಫೆಡರೇಷನ್‌ನ ಉಪಾಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಫುಟ್ಬಾಲ್ ಫೆಡರೇಷನ್‌ನ ಅಧ್ಯಕ್ಷರೂ ಆಗಿರುವ ಎನ್.ಎ. ಹ್ಯಾರಿಸ್ ಅವರು ಅಧ್ಯಕ್ಷತೆ ವಹಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಬೆಂಗಳೂರು ಪೊಲೀಸ್ ಸಹಾಯಕ ಕಮಿಷನರ್ ಬಾಲಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.