ಚಂದರಗಿಯ SPDCL ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಚಂದರಗಿ: ಬಾಗಲಕೋಟೆ ಜಿಲ್ಲೆಯ ಮುಧೋಳಲ್ಲಿ ನಡೆದ ಪದವಿ ಪೂರ್ವ ಕಾಲೇಜಿನ ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಂದರಗಿ ಕ್ರೀಡಾ ಶಾಲೆಯ ವಿದ್ಯಾರ್ಥಿಗಳಾದ
ಕುಮಾರ್ ಹೊನ್ನಪ್ಪ ಧರ್ಮಟ್ಟಿ ಹಾಗೂ ಕುಮಾರ್ ಅಭಿಷೇಕ್ ಕೊಪ್ಪದ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. Kumar Honnappa Dharmatti and Kumar Abhishek Koppad, students of Chandaragi Sports School, have been selected for the national level.
ಕುಮಾರ್ ಹೊನ್ನಪ್ಪ ಧರ್ಮಟ್ಟಿ 20 ಕಿಲೋ ಮೀಟರ್ ರೋಡ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ನಾಲ್ಕು ಕಿಲೋ ಮೀಟರ್ ಟ್ರ್ಯಾಕ್ ಸೈಕ್ಲಿಂಗ್ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕುಮಾರ್ ಅಭಿಷೇಕ್ ಕೊಪ್ಪದ್ 1 ಕಿಲೋ ಮೀಟರ್ ವೈಯಕ್ತಿಕ ಟೈಮ್ ಟ್ರೈನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವುದರೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸ್ಪೋಕೊ ‘SPOCO’ (Sports Promotion and Development Co-operative Ltd) ಸಂಸ್ಥೆಯ ಸಂಸ್ಥಾಪಕರು, ಸಂಸ್ಥೆಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಆಡಳಿತ ಮಂಡಳಿಯ ಸರ್ವ ಸದಸ್ಯರು ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಸರ್ವ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.

