ವಾಲಿಬಾಲ್ ಪಂದ್ಯಾಟಕ್ಕೆ ಕೆಪಿಎಸ್ ಕೋಟೇಶ್ವರದ ಪಂಚಮಿ ಆಯ್ಕೆ
ಕುಂದಾಪುರ : ಉಪನಿರ್ದೇಶಕರ ಕಚೇರಿ, ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರ ತಾಲೂಕು ತಂಡವನ್ನು ಪ್ರತಿನಿಧಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್, ಪ್ರೌಢಶಾಲಾ ವಿಭಾಗ, ಕೋಟೇಶ್ವರದ ವಿದ್ಯಾರ್ಥಿನಿ ಕುಮಾರಿ ಪಂಚಮಿ ಅವರು ಉತ್ತಮ ಪ್ರದರ್ಶನ ನೀಡಿ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
Kumari Panchami, a student of Karnataka Public School, High School Division, Koteshwara, has been selected for the Mysore Division level volleyball tournament after performing well.
ಉಡುಪಿ ಜಿಲ್ಲೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳ್ವೆ ಕುಂದಾಪುರ ಇಲ್ಲಿ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಂಚಮಿ ಅವರು ಭಾಗವಹಿಸಲಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ ಶೆಟ್ಟಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಉದಯ ಮಡಿವಾಳ ಎಂ. ಅವರು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಪಂದ್ಯಾಟದಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

