Contact Information

1st floor, Murali Krishna Mansion, Near Krashi Kendra , Brahmavara - 576213 ,Udupi,Karnataka,India

We Are Available 24/ 7. Call Now.

ರಾಜ್ಯಮಟ್ಟದ ಯೂತ್ ಕಪ್ ಕಬಡ್ಡಿ

ಸ್ಪೋರ್ಟ್ಸ್ ಮೇಲ್ ವರದಿ

ಗೇಮ್ ಚೇಂಜರ್ ಎಂಎಸ್‌ಆರ್ ಗೋಕುಲ ಬೆಂಗಳೂರು ಇವರ ಆಶ್ರಯದಲ್ಲಿ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ಡಿಸೆಂಬರ್ 21 ರಿಂದ 23ರವರೆಗೆ ರಾಜ್ಯಮಟ್ಟದ ಯೂತ್ ಕಪ್ ಕಬಡ್ಡಿ ಚಾಂಪಿಯನ್‌ಷಿಪ್ ನಡೆಯಲಿದೆ.

ಮಹಿಳಾ ಹಾಗೂ ಪುರುಷರ ವಿಭಾಗದಲ್ಲಿ ನಡೆಯಲಿರುವ ಈ ಚಾಂಪಿಯನ್‌ಷಿಪ್ ನಡೆಯಲಿದೆ. ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಎಚ್‌ಎಂಟಿ ಕ್ರೀಡಾಂಗಣದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯಲ್ಲಿ ನೋಂದಾಯಿಸಲ್ಪಟ್ಟಿರುವ ಕ್ಲಬ್, ಸಂಘಟನೆ ಹಾಗೂ ತಂಡಗಳು ಈ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳಲು ಅರ್ಹವಾಗಿವೆ. ಹೆಸರನ್ನು ನೋಂದಾಯಿಸಲು ಡಿಸೆಂಬರ್ 18 ಕೊನೆಯ ದಿನಾಂಕವಾಗಿರುತ್ತದೆ.
ಚಾಂಪಿಯನ್ ಪಟ್ಟ ಗೆಲ್ಲುವ ಪುರುಷರ ತಂಡಕ್ಕೆ 75,000 ರೂ. ನಗದು ಬಹುಮಾನ, ರನ್ನರ್ ಅಪ್‌ಗೆ 75,000 ರೂ. ನಗದು ಬಹುಮಾನ ಹಾಗೂ ಸೆಮಿಫೈನಲ್‌ನಲ್ಲಿ ಸೋತ ತಂಡಕ್ಕೆ ತಲಾ 25,000 ರೂ. ನಗದು ಬಹುಮಾನ ನೀಡಲಾಗುವುದು. ಚಾಂಪಿಯನ್ ಮಹಿಳಾ ತಂಡಕ್ಕೆ 50,000 ರೂ. ನಗದು ಬಹುಮಾನ, ರನ್ನರ್ ಅಪ್‌ಗೆ 30,000 ರೂ. ನಗದು ಬಹುಮಾನ ಹಾಗೂ ಸೆಮಿಫೈನಲ್‌ನಲ್ಲಿ ಸೋತ ತಂಡಕ್ಕೆ ತಲಾ 15,000 ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು.
ಹೆಚ್ಚಿನ ವಿವರಗಳಿಗೆ ಪ್ರಧಾನ ಕಾರ್ಯದರ್ಶಿ ವಿ. ಮುನಿರಾಜು 9535666991 ಅಥವಾ ಚೇರ್ಮನ್ ಎಂ. ಷಣ್ಮುಗಂ9886000142ಅವರನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

administrator