Thursday, October 10, 2024

ಕಬಡ್ಡಿ: ರಾಜ್ಯ ಮಟ್ಟಕ್ಕೆ ಜನತಾ ಪದವಿಪೂರ್ವ ಕಾಲೇಜು ಆಯ್ಕೆ

ಕುಂದಾಪುರ: ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಹಾಗೂ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಪುರುಷರ ಕಬಡ್ಡಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ತಂಡ ಆಗ್ರ ಅಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. Udupi district level kabaddi tournament Janatha Pre University College Hemmadi Champions.

ಕಾಲೇಜಿನ ಏಳು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿಘ್ನೇಶ್ವರ, ರಥನ್‌, ರಿತೇಶ್‌, ಅನುಷಾ, ನವಾಜ್‌, ಜೀತೇಂದ್ರ ಮತ್ತು ಚರಣ್‌ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಟಗಾರರು. ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಆಯೋಜಿಸಿದ ಪದವಿಪೂರ್ವ ಬಾಲಕ/ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 2 ತಂಡಗಳು ಪ್ರಥಮ ಸ್ಥಾನ ಪಡೆದು,ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿವೆ.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಪದವಿಪೂರ್ವ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಕ್ಕೆ ಆಯ್ಕೆ ಯಾಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಕ್ರಮವಾಗಿ-ವಿಘ್ನೇಶ್,ರತನ್,ರಿತೇಶ್, ನವಾಜ್,ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿ ಕುಮಾರಿ ಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಬಿದ್ಕಲ್ ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಆಯೋಜಿಸಿದ ಪದವಿಪೂರ್ವ ಬಾಲಕ/ಬಾಲಕಿಯರ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು  3 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿರುತ್ತಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಪದವಿಪೂರ್ವ ಬಾಲಕ/ಬಾಲಕಿಯರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿರುತ್ತಾರೆ. ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿ.ಎಮ್ ವಿದ್ಯಾನಿಕೇತನ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ 3 ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನದೊಂದಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಎನ್.ವಿ. ಪದವಿಪೂರ್ವ ಕಾಲೇಜು ಕಾರ್ಕಳ ಸಂಯುಕ್ತ  ಆಶ್ರಯದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ 3 ವಿದ್ಯಾರ್ಥಿಗಳು ಚಿನ್ನದ ಪದಕ ಹಾಗೂ 4 ವಿದ್ಯಾರ್ಥಿಗಳು ಬೆಳ್ಳಿಯ ಪದಕವನ್ನು ಪಡೆದಿರುತ್ತಾರೆ. ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ನೆಹರೂ ಕ್ರಿಡಾಂಗಣ ಶಿವಮೊಗ್ಗದಲ್ಲಿ ನಡೆದ ಇಂಟರ್ನ್ಯಾಷನಲ್ ಲೆವೆಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶರಣ್ಯ ಕಟಾ ವಿಭಾಗದಲ್ಲಿ ಚಿನ್ನದ ಪದಕ.ಕುಮಟೆ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾಳೆ. ಹಾಗೂ ಅಮಿತ್ ಕುಮಾರ್ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗ ಕಂಚಿನ ಪದಕವನ್ನು ಪಡೆದಿರುತ್ತಾನೆ. ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಶನ್ (ರಿ.)ನಡೆಸಿದ 5ನೇ ಕರ್ನಾಟಕ ಸ್ಟೇಟ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್ 2024ರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ತನ್ವಿತಾ  ಆರ್ಟಿಸ್ಟಿಕ್ ಪೇರ್ ವಿಭಾಗದಲ್ಲಿ ದ್ವಿತೀಯ ಸ್ಥಾನ (ಬೆಳ್ಳಿ ಪದಕ) ಹಾಗೂ ಆರ್ಟಿಸ್ಟಿಕ್ ಸೋಲೋ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ.  ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶೆಲ್ ಡಿಸೋಜ ಪದವಿಪೂರ್ವ ಶಿಕ್ಷಣ ಇಲಾಣಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಟೆನ್ನಿಕಾಯ್ಟ್‌ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಟೆನ್ನಿಕಾಯ್ಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ದ್ವಿತೀಯ  ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ರಿಮೇಶ್ ರಾಜ್ಯ ಮಟ್ಟಕ್ಕೆ ಆಯ್ಕೆ.

Related Articles