ಅಗ್ರ ಸ್ಥಾನ ಕಾಯ್ದುಕೊಂಡ ಭಾರತ, ಕೊಹ್ಲಿ

0
220
ದುಬೈ:

ಐಸಿಸಿ ಗುರುವಾರ ನೂತನವಾಗಿ ಬಿಡುಗಡೆ ಮಾಡಿದ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ಟೆಸ್ಟ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿಯೇ ಮುಂದುವರಿದಿದೆ. ನಿರೀಕ್ಷೆಯಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲೇ ಉಳಿದುಕೊಂಡಿದ್ದಾರೆ.

ಇತ್ತೀಚೆಗೆ ಭಾರತ ತಂಡ, ವೆಸ್ಟ್ ಇಂಡೀಸ್ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಇದರೊಂದಿಗೆ ಭಾರತ 116 ಅಂಕಗಳೊಂದಿಗೆ ಅಗ್ರ ಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಂಡಿದೆ. ದಕ್ಷಿಣ ಆಫ್ರಿಕಾ ಎರಡನೇ ರ್ಯಾಂಕಿಂಗ್ ನಲ್ಲಿದೆ.
ಭರ್ಜರಿ ಲಯದಲ್ಲಿರುವ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಮಾಡಿದ್ದರು. ಒಟ್ಟು 935 ಅಂಕಗಳೊಂದಿಗೆ ಕೊಹ್ಲಿ ಟೆಸ್ಟ್ ವಿಭಾಗದಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಇನ್ನೂ ಚೆಂಡು ವಿರೂಪ ಪ್ರಕರಣದಲ್ಲಿ ಆಸ್ಟ್ರೇಲಿಯಾ ತಂಡದಿಂದ ದೂರ ಉಳಿದಿರುವ ಸ್ಟೀವ್ ಸ್ಮಿತ್ 910 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಭಾರತದ ಮತ್ತೊಬ್ಬ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ 765 ಅಂಕಗಳೊಂದಿಗೆ ಆರನೇ ಸ್ಥಾನ ಅಲಂಕರಿಸಿದ್ದಾರೆ.